ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್​ನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಪುತ್ರಿಯ ಭೀಕರ ಕೊಲೆ, ಆರೋಪಿ ಫಯಾಜ್ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಯುವಕನೋರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ ಪುತ್ರಿ ಎಂದು ತಿಳಿದುಬಂದಿದೆ.

ನೇಹಾ ಬಿವಿಬಿಯಲ್ಲಿ ಎಂಸಿಎ 1ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಹಲವು ತಿಂಗಳಿಂದ ಆರೋಪಿ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು. ಇತ್ತೀಚೆಗೆ ಆಕೆಗೆ ಪ್ರಪೋಸ್ ಮಾಡಿದ್ದನ್ನು ಸಂತ್ರಸ್ತೆ ತಿರಸ್ಕರಿಸಿದ್ದಳು. ಆಕೆಯ ನಡೆಯಿಂದ ಕುಪಿತಗೊಂಡ ಆರೋಪಿ ನೇಹಾಳನ್ನು ಕೊಲೆ ಮಾಡಲು ಮುಂದಾಗಿದ್ದ. ತನ್ನ ಪ್ರಸ್ತಾಪವನ್ನು ತಿರಸ್ಕರಿಸಿದ ಹುಡುಗಿಯನ್ನು ಕೊಲೆ ಮಾಡುವುದಾಗಿ ಆರೋಪಿ ತನ್ನ ಸ್ನೇಹಿತರ ಬಳಿ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಪ್ರೇಮ ನಿರಾಕರಣೆ ಪ್ರಕರಣದಂತೆ ತೋರುತ್ತಿದೆ. ಕೊಲೆಯ ಉದ್ದೇಶದ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು ನಾವು ನೇಹಾಳ ಸ್ನೇಹಿತರು ಮತ್ತು ಸಂಬಂಧಿಕರ ವಿಚಾರಣೆ ನಡೆಸುತ್ತಿದ್ದೇವೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಎಬಿವಿಪಿಯ ನಗರ ಘಟಕ, ಬಿಜೆಪಿ ವಿದ್ಯಾರ್ಥಿ ಘಟಕ ಕಾಲೇಜು ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

No Comments

Leave A Comment