Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಮತಗಟ್ಟೆ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ಇಂಫಾಲ್, ಏ. 19: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಸದ್ದಿಗೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿ ಹೋಗಿದ್ದಾರೆ.

ಒಂದು ಬಿಷ್ಣುಪುರ ಜಿಲ್ಲೆಯ ಥಮನ್ ಪೋಕ್ಪಿ ಮತದಾನ ಕೇಂದ್ರದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯವನ್ನು ವ್ಯಕ್ತಿಯೊಬ್ಬರು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ದಾಳಿಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದೆ.

ಮಣಿಪುರದಲ್ಲಿ 2 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಅದರಂತೆ ಇಂದು ಮೊದಲ ಹಂತದ ಮತದಾನ ಪ್ರಾರಂಭಗೊಂಡಿದೆ. ಇನ್ನು ಮಣಿಪುರದಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಆದರೆ ಈ ಭದ್ರತೆಯ ಮಧ್ಯೆಯೂ ದುಷ್ಕರ್ಮಿಗಳು ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಥಮನ್ ಪೋಕ್ಪಿಯಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಜೊತೆಗೆ ಇವಿಎಂ ಮೆಷಿನ್ ಒಡೆದು ಹಾಕಿದ್ದಾರೆ. ಹಾಗೂ ದಾಳಿಯಿಂದಾಗಿ ಮತಗಟ್ಟೆಗಳ ಸುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment