ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲು
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ
ಮೃತಪಟ್ಟ ಬಾಲಕ ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ತಿಳಿದು ಬಂದಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.
ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು ಸುಹೈಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟ್ಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.