ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿದ ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ
ಬಾಲಿವುಡ್ನ ಸ್ಟಾರ್ ಕಪಲ್ ಆದಂತಹ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ಅವರು 17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದಾರೆ. ಏಪ್ರಿಲ್ 20ರಂದು ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಟ್ ಮಾಡಿರುವ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರ ಜೊತೆ ಮಗಳು ಆರಾಧ್ಯಾ ಕೂಡ ಸಾಥ್ ನೀಡಿದ್ದಾರೆ. ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಜೋಡಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಕೋರಿದ್ದಾರೆ. ಈ ಫೋಟೋ ನೋಡಿದ ಬಳಿಕ ಗಾಸಿಪ್ ಮಂದಿಯ ಬಾಯಿಗೆ ಬೀಗ ಹಾಕಿದಂತಾಗಿದೆ.
ಒಂದಷ್ಟು ದಿನಗಳ ಹಿಂದೆ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಗಾಸಿಪ್ ಹಬ್ಬಿತ್ತು. ಅವರಿಬ್ಬರು ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸಿದ್ದರು. ಅಭಿಮಾನಿಗಳು ಕೂಡ ಅದನ್ನು ನಿಜ ಎಂದು ನಂಬುವ ಹಂತಕ್ಕೆ ಹೋಗಿದ್ದರು. ಆದರೆ ನಂತರದ ದಿನಗಳಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಜೊತೆಯಾಗಿ ಕೆಲವು ಕಾರ್ಯಕ್ರಮಗಳಿಗೆ ಹಾಜರಾದಾಗ ಗಾಸಿಪ್ಗಳಿಗೆ ಪೂರ್ಣವಿರಾಮ ಬಿತ್ತು.
ಬಾಲಿವುಡ್ನಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರಿಗೆ ಸಖತ್ ಬೇಡಿಕೆ ಇದೆ. ತಮ್ಮದೇ ರೀತಿಯಲ್ಲಿ ಇಬ್ಬರೂ ಗುರುತಿಸಿಕೊಂಡಿದ್ದಾರೆ. ಅತ್ತ ಅಮಿತಾಭ್ ಬಚ್ಚನ್ ಕೂಡ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ದಿನಗಳಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ದಂಪತಿಯ ಪುತ್ರಿ ಆರಾಧ್ಯಾ ಕೂಡ ವೇದಿಕೆಗಳಲ್ಲಿ ಮಾತನಾಡಿ ಗಮನ ಸೆಳೆಯುತ್ತಿದ್ದಾರೆ. ಅವರು ಯಾವಾಗ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಅವರು ಹಲವು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದರು. ಆ ಬಳಿಕ ಅವರ ನಡುವೆ ಸ್ನೇಹ ಬೆಳೆಯಿತು. ನಂತರ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2007ರಲ್ಲಿ ಅವರಿಬ್ಬರು ಹಸೆಮಣೆ ಏರಿದರು. 2011ರಲ್ಲಿ ಐಶ್ವರ್ಯಾ ರೈ ಅವರು ಹೆಣ್ಣು ಮಗುವಿಗೆ (ಆರಾಧ್ಯಾ) ಜನ್ಮ ನೀಡಿದರು. ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ಸುಖ ಸಂಸಾರಕ್ಕೆ ಈಗ 17 ವರ್ಷ ತುಂಬಿದೆ.