ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಭೀಕರ ಅಪಘಾತ: ನಟ ಪಂಕಜ್ ತ್ರಿಪಾಠಿ ಬಾವ ನಿಧನ; ಸಹೋದರಿ ಸ್ಥಿತಿ ಗಂಭೀರ
ನಟ ಪಂಕಜ್ ತ್ರಿಪಾಠಿ ಅವರ ತಂದೆ ಕೆಲವೇ ತಿಂಗಳ ಹಿಂದೆ ನಿಧನರಾಗಿದ್ದರು. ಈಗ ಅವರ ಕುಟುಂಬದಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಪಂಕಜ್ ತ್ರಿಪಾಠಿ ಅವರ ಬಾವ ಕೊನೆಯುಸಿರು ಎಳೆದಿದ್ದಾರೆ. ಪಂಕಜ್ ತ್ರಿಪಾಠಿ ಅವರ ಸಹೋದರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಸ್ಥಿತಿ ಚಿಂತಾಜನಕವಾಗಿ ಎಂದು ಹೇಳಲಾಗಿದೆ. ಶನಿವಾರ (ಏಪ್ರಿಲ್ 20) ಸಂಜೆ ನಾಲ್ಕು ಗಂಟೆಗೆ ಜಾರ್ಖಂಡ್ನಲ್ಲಿ ಈ ಅಪಘಾತ ಸಂಭವಿಸಿದೆ. ಪಂಕಜ್ ತ್ರಿಪಾಠಿ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಆ ದೇವರ ನೀಡಲಿ ಎಂದು ಅಭಿಮಾನಿಗಳು, ಆಪ್ತರು ಪ್ರಾರ್ಥಿಸುತ್ತಿದ್ದಾರೆ.
ಪಂಕಜ್ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಹಾಗೂ ಅವರ ಪತಿ ರಾಜೇಶ್ ತಿವಾರಿ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅತಿ ವೇಗದಲ್ಲಿ ಇದ್ದಿದ್ದರಿಂದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತದ ತೀವ್ರತೆಗೆ ರಾಜೇಶ್ ತಿವಾರಿ ನಿಧನರಾಗಿದ್ದಾರೆ. ಕಾರಿನ ಒಳಗಿದ್ದ ರಾಜೇಶ್ ಮತ್ತು ಸರಿತಾ ಅವರನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರತೆಗೆದಿದ್ದಾರೆ.
ಅಪಘಾತದ ಬಳಿಕ ಧನ್ಬಾದ್ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ರಾಜೇಶ್ ತಿವಾರಿ ಹಾಗೂ ಸರಿತಾ ತಿವಾರಿ ಅವರನ್ನು ದಾಖಲಿಸಲಾಯಿತು. ಅಷ್ಟು ಹೊತ್ತಿಗಾಗಲೇ ರಾಜೇಶ್ ತಿವಾರಿ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದರು. ಸರಿತಾ ತಿವಾರಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿ ಸ್ಥಿತಿ ಸದ್ಯಕ್ಕಂತೂ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ. ಈ ಘಟನೆಯಿಂದ ಪಂಕಜ್ ತ್ರಿಪಾಠಿ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.
ಪಂಕಜ್ ತ್ರಿಪಾಠಿ ಅವರ ಬಾವ ರಾಜೇಶ್ ತಿವಾರಿ ಅವರು ಭಾರತೀಯ ರೇಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಚಿತ್ತರಂಜನ್ನಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ಹಳ್ಳಿಯಿಂದ ಚಿತ್ತರಂಜನ್ಗೆ ವಾಪಸ್ ಬರುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 2023ರ ಆಗಸ್ಟ್ ತಿಂಗಳಲ್ಲಿ ಪಂಕಜ್ ತ್ರಿಪಾಠಿ ಅವರ ತಂದೆ ನಿಧನರಾಗಿದ್ದರು. ಆ ನೋವು ಮರೆಯುವ ಮುನ್ನವೇ ಅವರ ಕುಟುಂಬದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸರಿತಾ ತಿವಾರಿ ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.