ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಲೋಕಸಭೆ ಚುನಾವಣೆ ಸಮಯದಲ್ಲೇ ಬಿಜೆಪಿ ಎಂಎಲ್‌ಸಿ ಕೆಪಿ ನಂಜುಂಡಿ ರಾಜೀನಾಮೆ, ನಾಳೆ ಕಾಂಗ್ರೆಸ್ ಸೇರ್ಪಡೆ
ಹುಬ್ಬಳ್ಳಿ, ಏಪ್ರಿಲ್ 23: ಲೋಕಸಭೆ ಚುನಾವಣೆಯ ಸಮಯದಲ್ಲೇ ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಬುಧವಾರ ಕಾಂಗ್ರೆಸ್ (Congress) ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.
ನಂಜುಂಡಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು.
ರಾಜೀನಾಮೆ ನೀಡಿದ ಬಳಿಕ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆರೋಪಿಸಿದರು.
ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ ಎಂದು ಅವರು ಹೇಳಿದರು.
ಬಸವರಾಜ್ ಹೊರಟ್ಟಿ ಅಸಮಾಧಾನ
ಕೆಪಿ ನಂಜುಂಡಿ ರಾಜೀನಾಮೆ ಕುರಿತು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದು, ರಾಜಿನಾಮೆ ಅಂಗೀಕರಿಸಿದ್ದೇನೆ. ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜತೆಗೆ, ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.
ನನ್ನ ಸಭಾಪತಿ ಅವಧಿಯಲ್ಲಿ 13 ಜನ ರಾಜಿನಾಮೆ ಕೊಟ್ಟಿದ್ದಾರೆ. ರಾಜಕೀಯದಲ್ಲಿ ನೈತಿಕತೆ ಈಗ ಕಡಿಮೆಯಾಗಿದೆ. ದುಡ್ಡೊಕೊಟ್ಟು, ತೆಗೆದುಕೊಂಡು ಓಟ್ ಹಾಕುವವರೆಗೆ ಪ್ರಜಾಪ್ರಭುತ್ವಕ್ಕೆ ಬೆಲೆಯಿಲ್ಲ. ಹಿಂದೆ ಸಂಗೀತಗಾರರು, ಸಾಹಿತಿಗಳು ಪರಿಷತ್‌ನಲ್ಲಿ ಇರುತ್ತಿದ್ದರು. ಈಗ ಹಣ, ತೋಳ್ಬಲದ ರಾಜಕೀಯ ನಡೆಯುತ್ತಿದೆ. ಯಾರಿಗೋ ಆಶ್ರಯ ಕಲ್ಪಿಸಲು ಎಮ್‌ಎಲ್‌ಸಿ ಮಾಡುತ್ತಾರೆ. ಸಂವಿಧಾನ ದುರುಪಯೋಗ ಆಗಬಾರದು, ಗೌರವಿಸುವ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.