Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಚಿತ್ರದುರ್ಗ, ಏ.23: ಫೋಕ್ಸೋ ಪ್ರಕರಣ  ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

No Comments

Leave A Comment