ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬಾವಿಯೊಳಗೆ ಆಕ್ಸಿಜನ್ ಸಿಗದೇ ರಿಂಗ್ ಕಾರ್ಮಿಕರಿಬ್ಬರು ಮೃತ್ಯು

ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಎಂದು ಗುರುತಿಸಲಾಗಿದೆ.

ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಕಾರ್ಮಿಕ ಆಕ್ಸಿಜನ್ ಕೊರತೆಯಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದಿರುವ ಹಿನ್ನೆಲೆ ಇನ್ನೊಬ್ಬ ಇಳಿದಿದ್ದು, ಈ ವೇಳೆ ಆತನೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾನೆ. ಮೃತದೇಹವನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

No Comments

Leave A Comment