Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

Neha Hiremath murder case: ಆರೋಪಿ ಫಯಾಜ್ 6 ದಿನ ಸಿಐಡಿ ವಶಕ್ಕೆ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್(23ವ) ಹತ್ಯೆ ಪ್ರಕರಣದ ಆರೋಪಿ ಫಯಾಜ್ ಬಾಬಾಸಾಹೇಬ್ ಖೊಂಡಾನಾಯಕ್ ನನ್ನು 6 ದಿನಗಳ ಕಾಲ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.

ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಅದರಂತೆ ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ತನಿಖೆ ಆರಂಭವಾಗಿತ್ತು. ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್ ಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹುಬ್ಬಳ್ಳಿಯ ಬಿವಿಪಿ ಕಾಲೇಜು ಕ್ಯಾಂಪಸ್ ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಕೂಡಲೇ ಪ್ರಕರಣದ ಮುಖ್ಯ ಆರೋಪಿ ಫಯಾಜ್ ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಬಂಧಿಸಿದ್ದರು. ಇದೀಗ ಸಿಐಡಿ ಕಸ್ಟಡಿಗೊಪ್ಪಿಸಿ ಒಂದನೇ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಾಲೇಜು ಎದುರು ಭಾರೀ ಪ್ರತಿಭಟನೆ: ಇಲ್ಲಿನ ಬಿವಿಪಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ವತಿಯಿಂದ(NSUI) ವಿದ್ಯಾರ್ಥಿಗಳು ಬುಧವಾರ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.

ಬಿಆರ್ ಟಿಎಸ್ ಕಾರಿಡಾರ್ ನಲ್ಲಿ ಚಿಗರಿ ಬಸ್ ಗಳ ಸಂಚಾರ ಮತ್ತು ಹುಬ್ಬಳ್ಳಿ-ಧಾರವಾಡ ನಡುವೆ ವಾಹನ ಸಂಚಾರ ಸ್ಥಗಿತಗೊಳಿಸಿ ವಿದ್ಯಾರ್ಥಿಗಳು ಆರೋಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ಎನ್ ಎಸ್ ಯುಐ ಬಾವುಟ ಪ್ರದರ್ಶಿಸಿ ನೇಹಾ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಫಲಕ ಪ್ರದರ್ಶಿಸಿ ಘೋಷಣೆ ಕೂಗಿದರು. ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಎಂದು ಒತ್ತಾಯಿಸಿದರು.ಶೀಘ್ರ ತನಿಖೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು ಎಂದರು.

No Comments

Leave A Comment