ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಬೆಂಕಿ ಮೊದಲು ಟಿಂಬರ್​ ಯಾರ್ಡ್​ನಲ್ಲಿ ಕಾಣಿಸಿಕೊಂಡಿದೆ, ಬಳಿಕ ಲೋವಬಲ್​ ಸ್ಪೋರ್ಟ್​​ ಹೆಸರಿನ ಗಾರ್ಮೆಂಟ್ಸ್​​​​​​​ ಕಟ್ಟಡ, ವಾಹನ ವಾಶ್​​ ಕೇಂದ್ರಕ್ಕೂ ಹಬ್ಬಿದೆ. ಗಾರ್ಮೆಂಟ್ಸ್​​​​​ ಫ್ಯಾಕ್ಟರಿಗೆ ಬೆಂಕಿ ತಗುಲಿದ ಪರಿಣಾಮ ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ನಾಶವಾಗಿದೆ.

ಮರದ ಬಳಿ ಮಧ್ಯರಾತ್ರಿ 12.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕೆಲವೇ ಕ್ಷಣದಲ್ಲಿ ಪಕ್ಕದ ಕಾರು ಮತ್ತು ಬೈಕ್ ಗ್ಯಾರೇಜ್‌ಗೆ ವ್ಯಾಪಿಸಿದೆ. ಟಿಂಬರ್ ಯಾರ್ಡ್‌ನಿಂದ ಸುಮಾರು 100 ಮೀಟರ್ ದೂರದಲ್ಲಿರುವ ಗಾರ್ಮೆಂಟ್ ಫ್ಯಾಕ್ಟರಿಗೆ ವ್ಯಾಪಿಸಿದೆ ಎಂದು ಇಲೆಕ್ಟ್ರಾನಿಕ್ಸ್ ಸಿಟಿಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ (ಡಿಎಫ್‌ಒ) ಹೇಳಿದ್ದಾರೆ.

ಸುಮಾರು 10 ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ತರಲಾಯಿತು. ಟಿಂಬರ್ ಯಾರ್ಡ್‌ನಲ್ಲಿದ್ದ ಮರ ಮತ್ತು ಇತರ ನಿರ್ಮಾಣ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಗ್ಯಾರೇಜ್‌ನಲ್ಲಿದ್ದ ಸುಮಾರು 35 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಗ್ಯಾರೇಜ್‌ನಲ್ಲಿ ಸರ್ವಿಸ್ ಮಾಡಲು ಬಿಟ್ಟಿದ್ದ ಮರ್ಸಿಡಿಸ್ ಬೆಂಜ್ ಸೇರಿದಂತೆ ಮೂರು ಕಾರುಗಳಿಗೂ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

No Comments

Leave A Comment