ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೇಳಲು ಬಿಜೆಪಿಯವರಿಗೆ ಯಾವ ನೈತಿಕ ಹಕ್ಕು ಇದೆ: ಸಿಎಂ ಸಿದ್ದರಾಮಯ್ಯ

ಬೀದರ್: ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ. ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ. ಆಕೆಯ ಕುಟುಂಬಕ್ಕೆ ಶೀಘ್ರವೇ ನ್ಯಾಯ ಒದಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೀದರ್ ನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳಲು ಬಿಜೆಪಿ ನಾಯಕರಿಗೆ ಯಾವ ನೈತಿಕ ಹಕ್ಕು ಇದೆ, ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ ಒಂದು ಪ್ರಕರಣ ತೋರಿಸಿ ನೋಡೋಣ ಎಂದು ಕೇಳಿದರು.

ನೇಹಾ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ, ಇದರಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.

ಇಂದು ನೇಹಾ ನಿವಾಸಕ್ಕೆ ಸಿಎಂ: ಮೊನ್ನೆ ಏಪ್ರಿಲ್ 18ರಂದು ಸಹಪಾಠಿಯಿಂದ ಹತ್ಯೆಗೀಡಾದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ನಿವಾಸಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ತಂದೆ ನಿರಂಜನ್ ಹಿರೇಮಠ, ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ನೇಹಾ ನಿವಾಸ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

No Comments

Leave A Comment