ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಚಾಮರಾಜನಗರದಲ್ಲಿ ಗಲಾಟೆ: ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು, ಲಾಠಿ ಚಾರ್ಜ್

ಚಾಮರಾಜನಗರ, (ಏಪ್ರಿಲ್ 26): ಲೋಕಸಭಾ ಚುನಾವಣೆ  ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ  ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ.

ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ಆದ್ರೆ, ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ.

ಇನ್ನು ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಇನ್ನು ಘಟನೆಯಲ್ಲಿ ಚುನಾವಣಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹನೂರು ತಹಸೀಲ್ದಾರ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

kiniudupi@rediffmail.com

No Comments

Leave A Comment