``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಗಾಯಗೊಂಡ ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ.

ಘಟನೆಯ ನಂತರ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಅಸನ್ಸೋಲ್​ನಲ್ಲಿ ಟಿಎಂಸಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರ ಪರ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿದ್ದಾರೆ.

ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಅವರು ಎರಡನೇ ಬಾರಿ ಗಾಯಗೊಂಡಿದ್ದಾರೆ. ಮಾರ್ಚ್ 14 ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದಲ್ಲಿ ಬಿದ್ದು ಅವರ ಹಣೆ ಮತ್ತು ಮೂಗಿನ ಮೇಲೆ ಗಾಯವಾಗಿತ್ತು.

No Comments

Leave A Comment