``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......
ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಯಡವಟ್ಟು, 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ
ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್ʼನ ಅವಾಂತರದ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.
ಸಿಟಿ ಮಾರ್ಕೆಟ್ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ, ಗಾಬರಿಯಲ್ಲಿ ಬ್ರೇಕ್ ಬದಲು ಎಕ್ಸಲರೇಟರ್ ತುಳಿದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದ ವೇಳೆ ಕಾರಿನಲ್ಲಿದ್ದ 4 ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದು, ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಚಾಲಕ ಸುಮಂತ್ನನ್ನ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.