ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ವಿದ್ಯುತ್ ಕಂಬಕ್ಕೆ ವ್ಯಾಗನಾರ್ ಕಾರು ಢಿಕ್ಕಿ: ಮಹಿಳೆ ಸಾವು

ಪಡುಬಿದ್ರಿ: ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಶುಕ್ರವಾರ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದುದರ ಪರಿಣಾಮವಾಗಿ ಅದರ ಚಾಲಕ ಪುರುಷೋತ್ತಮ ಆರ್.   ಅವರ ಪತ್ನಿ ಸುಮಂಗಲಾ (೫೫) ಸಾವನ್ನಪ್ಪಿದ್ದಾರೆ.

ರಾಜ್ಯ ಹೆದ್ದಾರಿ-೦೧ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮವಾಗಿ ಈ ಅಪಘಾತವು ಸಂಭವಿಸಿದೆ. ಈ ದಂಪತಿ ಕಾರ್ಕಳ ಮಾಳದಲ್ಲಿನ ಉಪನಯನ ಕಾರ್ಯಕ್ರಮಕ್ಕೆ ಮಂಗಳೂರಿನ ಕಾವೂರಿನಿಂದ ಹೊರಟು ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಸಹಜವಾಗಿ ವೇಗವಾಗಿಯೇ ಬರುತ್ತಿದ್ದ ಕಾರು ಒಮ್ಮೆಲೇ ರಸ್ತೆಯ ತೀರ ಎಡಕ್ಕೆ ಚಲಿಸಿ ಡಾಮರು ರಸ್ತೆಯಿಂದ ಮಣ್ಣು ರಸ್ತೆಗೆ ಇಳಿದು ರಸ್ತೆಯ ಬದಿಯಲ್ಲಿದ್ದ ಸಿಮೆಂಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಈ ಅಪಘಾತದಿಂದ ಸುಮಂಗಲಾ ಎಂ. ಅವರ ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಚಾಲಕ ಪುರುಷೋತ್ತಮ ಅವರಿಗೂ ಗಾಯಗಳಾಗಿದ್ದು, ಸಾರ್ವಜನಿಕರ ಸಹಾಯದಿಂದ ಇವರೀರ್ವರನ್ನೂ ಕಾರಿನಿಂದ ಹೊರತೆಗೆದು ಚಿಕಿತ್ಸೆಯ ಬಗ್ಗೆ ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ  ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಸುಮಂಗಲಾ ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಅಪಘಾತದಿಂದ ಕಾರಿನ ಎದುರು ಭಾಗ ಸಂಪೂರ್ಣ ಜಖಂಗೊAಡಿದೆ. ಅಪಘಾತದ ರಭಸಕ್ಕೆ ಸಿಮೆಂಟ್ ವಿದ್ಯುತ್ ಕಂಬವು ಅಲ್ಲಲ್ಲಿ ಬಿರುಕು ಬಿಟ್ಟಿರುತ್ತದೆ. ಪುರುಷೋತ್ತಮ ಅವರು ಈಚೆಗಷ್ಟೇ ಕೆಐಒಸಿಎಲ್‌ನಿಂದ ನಿವೃತ್ತರಾಗಿದ್ದು ಕಾವೂರಿನಲ್ಲೇ ನೆಲೆಸಿದ್ದರು. ಮೃತ ಸುಮಂಗಲಾ ಅವರು ಪತಿ, ಅಮೇರಿಕಾದಲ್ಲಿರುವ ತಮ್ಮ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಪಡುಬಿದ್ರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

kiniudupi@rediffmail.com

No Comments

Leave A Comment