ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ವಿಜಯಪುರದಲ್ಲಿ ನಡೆದ ಬಾರಿ ಅನಾಹುತ: ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತ್ಯು
ವಿಜಯಪುರ : ಭಾನುವಾರ ಸಂಜೆ ನಡೆದ ಲಚ್ಯಾಣ ಸಿದ್ಧಲಿಂಗೇಶ್ವರ ಮಹಾರಥೋತ್ಸವದ ವೇಳೆ ನಡೆದ ನೂಕುನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೀವ್ರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ವಿಜಯಪುರದ ಸರ್ಕಾರಿ ಜಿಲ್ಲಾ ಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವರ ಹಾಗೂ ಗಾಯಾಳು ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ . ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.