ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂ 3 ರಂದು ಮತದಾನ
ಬೆಂಗಳೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ.
ಚುನಾವಣಾ ಆಯೋಗ ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಮತ್ತು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ.
ಇನ್ನು ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.