ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಲೈಂಗಿಕ ದೌರ್ಜನ್ಯ ಕೇಸ್: ಪ್ರಜ್ವಲ್ ವಿರುದ್ಧ ಮತ್ತೊಂದು ದೂರು ದಾಖಲು
ಬೆಂಗಳೂರು, ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀ ಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಅದೇ ದೂರು ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ.
ಈ ಪ್ರಕರಣ ತನಿಖೆ ನಡೆಯುತ್ತಿರುವ ವೇಳೆ ಇದೀಗ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ತನಿಖೆಯನ್ನೂ ಎಸ್ಐಟಿ ಕೈಗೆತ್ತಿಕೊಂಡಿದೆ.
ದೂರಿನ ಬಗ್ಗೆ ಸುದ್ದಿಗಾರರೊಂದಿಗೆಮಾತನಾಡಿದ ಗೃಹ ಸಚಿವ ಜಿ. ಪರಮೇ ಶ್ವರ್, ಮತ್ತೊಬ್ಬ ಮಹಿಳೆ ದೂರು ನೀ ಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.