ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಅಶ್ಲೀಲ ವಿಡಿಯೋ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ, ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ದೆಹಲಿ, ಮೇ.4: ಪ್ರಜ್ವಲ್​​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್​​ ಗಾಂಧಿ ಅವರು ಈ ಪತ್ರದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್​​ ಶಾ ಅವರ ಬಗ್ಗೆಯೂ ಕಿಡಿಕಾರಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು, ಅವರಿಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿದ್ದಾರೆ.

ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಹೇಳಿದ್ದಾರೆ.

ಇನ್ನು ಕರ್ನಾಟಕ ರಾಜ್ಯ ಸರ್ಕಾರ ಎಸ್​​​ಐಟಿ ರಚನೆ ಮಾಡಿದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆ ತರುವ ಮನವಿ‌ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾಗಿದೆ ಎಂದು ರಾಹುಲ್​​​ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಮಾಡಿದ್ದಾರೆ.

No Comments

Leave A Comment