Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ದಕ್ಷಿಣ ಕನ್ನಡ:ತಾಯಿಯೊಂದಿಗೆ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದ ಮಹಿಳೆ ನಾಪತ್ತೆಯಾದ ಘಟನೆ ಸಂಭವಿಸಿದೆ.

ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಬಂದವರು ಸಿಟಿ ಸೆಂಟರ್ ಮಾಲ್ ನಿಂದ ಕಾಣೆಯಾಗಿದ್ದಾಗಿ ದೂರು ದಾಖಲಾಗಿದೆ.

ಈ ಬಗ್ಗೆ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾಣೆ ಪ್ರಕರಣ ದಾಖಲಾಗಿರುತ್ತದೆ. ಸಫಾನ ರವರಿಗೆ ಇಬ್ಬರು ಮಕ್ಕಳಿದ್ದು ಸಫಾನ ರವರ ವಯಸ್ಸು 27 ವರ್ಷ, 4.5 ಅಡಿ ಎತ್ತರ, ಬಿಳಿ ಮೈಬಣ್ಣ, ಹಾಗೂ ಕಪ್ಪು ಬಣ್ಣದ ಬುರ್ಖಾ ಧರಿಸಿರುತ್ತಾರೆ. ಬ್ಯಾರಿ, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಾರೆ.

ಚಹರೆವುಳ್ಳ ಮಹಿಳೆಯು ಎಲ್ಲಿಯಾದರೂ ಕಂಡು ಬಂದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಬೇಕಾಗಿ ಕೋರಿಕೆ. ಸಂಪರ್ಕಿಸಬೇಕಾದ ಮೊಬೈಲ್ ನಂಬ್ರ: 9480805338,9480802321,0824-2220516

No Comments

Leave A Comment