``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......
ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ
ಬೆಂಗಳೂರು: ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ ಘೋಷಿಸಿದೆ.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರದ ಯಾವುದೇ ಪ್ರತಿಕ್ರಿಯೆ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಸುಪ್ರೀಂಕೋರ್ಟ್ ಮಧ್ಯಪ್ರವೇಶದೊಂದಿಗೆ ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೂ 275 ಕೋಟಿ ರೂ. ಪರಿಹಾರವನ್ನು ಕೇಂದ್ರ ಸರಕಾರ ನೀಡಿದೆ.