ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಲೈಂಗಿಕ ದೌರ್ಜನ್ಯ ಪ್ರಕರಣ: ಹೊಳೆ ನರಸೀಪುರದ ಹೆಚ್. ಡಿ. ರೇವಣ್ಣ ನಿವಾಸದಲ್ಲಿ ಎಸ್ ಐಟಿಯಿಂದ ಸ್ಥಳ ಮಹಜರು
ಹೊಳೆ ನರಸೀಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.
ಹೊಳೆ ನರಸೀಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು.
ಅಧಿಕಾರಿಗಳು ಮಹಜರು ಪ್ರಕ್ರಿಯೆ ವಿಡಿಯೋ ಮಾಡಿದರು. ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿಕೊಂಡರು. ಸ್ಥಳ ಮಹಜರು ವೇಳೆಯಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಮನೆಯಲ್ಲಿಯೇ ಇದ್ದರು. ರೇವಣ್ಣ ಪರ ವಕೀಲರು, ಜೆಡಿಎಸ್ ನಾಯಕರು ಸ್ಥಳದಲ್ಲಿ ಹಾಜರಿದ್ದರು.