ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬಾಗಲಕೋಟೆ:ಸಿದ್ದನಕೊಳ್ಳ ಮಠದ ಸ್ವಾಮೀಜಿ ಕಾರು ಭೀಕರ ಅಪಘಾತ; ಶಿವಕುಮಾರ ಸ್ವಾಮಿಜಿ ಆಸ್ಪತ್ರೆಗೆ ದಾಖಲು
ಸಿದ್ದನಕೊಳ್ಳದ ಮಠ ಶಿವಕುಮಾರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿ ಬಿದ್ದಿದೆ. ಸ್ವಾಮೀಜಿಯವರ ತಲೆಯ ಭಾಗದಲ್ಲಿ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.