ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಬಾಗಲಕೋಟೆ:ಸಿದ್ದನಕೊಳ್ಳ ಮಠದ ಸ್ವಾಮೀಜಿ ಕಾರು ಭೀಕರ ಅಪಘಾತ; ಶಿವಕುಮಾರ ಸ್ವಾಮಿಜಿ ಆಸ್ಪತ್ರೆಗೆ ದಾಖಲು

ಸಿದ್ದನಕೊಳ್ಳದ ಮಠ ಶಿವಕುಮಾರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿ ಬಿದ್ದಿದೆ. ಸ್ವಾಮೀಜಿಯವರ ತಲೆಯ ಭಾಗದಲ್ಲಿ ಗಂಭೀರ‍ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

kiniudupi@rediffmail.com

No Comments

Leave A Comment