ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ರೇವಣ್ಣಗೆ ಸಿಗದ ರಿಲೀಫ್; ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ-ಯಾವುದೇ ಕ್ಷಣ ಬ೦ಧಿಸುವ ಸಾಧ್ಯತೆ
ಬೆಂಗಳೂರು: ರೇವಣ್ಣಗೆ ಸಗದ ರಿಲೀಫ್; ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯ ನಿರಾಕರಿಸಿದೆ.ಅದರಿ೦ದ ಅವರಾನ್ನು ಯಾವುದೇ ಕ್ಷಣ ಬ೦ಧಿಸುವ ಸಾಧ್ಯತೆಯಿದೆ.
ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಮಹಿಳೆಯ ಮಗ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದ. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮೊದಲ ಆರೋಪಿಯಾಗಿದ್ದಾರೆ.
ಈ ಪ್ರಕರಣದಲ್ಲಿ HD ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಆಪ್ತ ಸತೀಶ್ ಎಂಬಾತ ಎರಡನೇ ಆರೋಪಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ, ಬಂಧನ ಭೀತಿಯಲ್ಲಿರುವ ಹೆಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧೀಗಳ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಕುರಿತಂತೆ ಶನಿವಾರ ವಿಚಾರಣೆ ನಡೆದ ಸಂದರ್ಭದಲ್ಲಿ ರೇವಣ್ಣ ಅವರ ವಕೀಲರು ವಾದ ಮಂಡಿಸಿ, ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರ ಇಲ್ಲ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಪ್ರಕರಣದಲ್ಲಿ ತಾನು ಮುಗ್ದ ಎಂಬುದನ್ನು ಸಾಬೀತುಪಡಿಸಲು ರೇವಣ್ಣ ಅವರಿಗೆ ಅವಕಾಶ ಸಿಗಬೇಕು. ಹಾಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ರೇವಣ್ಣ ಅವರು ಕೂಡಲೇ ಎಸ್‌ಐಟಿ ಮುಂದೆ ಹಾಜರಾಗಲಿದ್ದಾರೆ ಎಂದು ಕೋರ್ಟ್‌ಗೆ ಮನವರಿಕೆ ಮಾಡಿದರು.
ಇದಕ್ಕೆ ಎಸ್ಐಟಿ ವಕೀಲ ಜಗದೀಶ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಂತ್ರಸ್ತೆಯ ಪ್ರಾಣ ಉಳಿಸುವುದು ಮುಖ್ಯವಾಗಿದೆ ಎಂದು ಅವರು ನ್ಯಾಯಾಧೀಶರ ಗಮನಸೆಳೆದರು.
ವಾದ-ಪ್ರತಿವಾದ ಆಲಿಸಿದ ಆದೇಶ ಪ್ರಕಟಿಸಿದ ನ್ಯಾಯಾಧೀಶರು ಆರೋಪಿ ಹೆಚ್.ಡಿ.ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿದರು.