ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ರಾಜಕೀಯ ರೇವಣ್ಣನನ್ನು ಬಂಧಿಸಿದ್ದೇವೆ, ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳ ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯೆ ಅಪಹರಣದ ಆರೋಪ ಪ್ರಕರಣವನ್ನು ವಿಶೇಷ ತನಿಖಾ ದಳದ ಮೂಲಕ ನಿಷ್ಪಕ್ಷಪಾತ, ಪಾರದರ್ಶಕ ತನಿಖೆಗೆ ಒಳಪಡಿಸಿ ನೊಂದವರ ಕಣ್ಣೀರು ಒರೆಸುವ ಪ್ರಯತ್ನವನ್ನು ಒಂದು ಸರ್ಕಾರವಾಗಿ ನಾವು ಮಾಡಿದ್ದೇವೆ. ಮಹಿಳೆಯರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಪ್ರಧಾನಿ ಮೋದಿ ಅವರೇ ಈಗ ನಿಮ್ಮ ಸರದಿ
ಮಹಿಳಾ ಕಾಳಜಿ ಬರೀ ನಿಮ್ಮ ಭಾಷಣಕ್ಕೆ ಸೀಮಿತವಲ್ಲ, ಕೃತಿಯಲ್ಲಿಯೂ ಇದೆ ಎನ್ನುವುದಾದರೆ ಬ್ರಿಜ್‌ಭೂಷಣ್ ಸಿಂಗ್, ಕುಲ್‌ದೀಪ್ ಸೆಂಗರ್ ರಂಥ ಮಹಿಳಾ ಪೀಡಕರು ಮಾಡಿರುವ ಪಾಪಕ್ಕೆ ತಕ್ಕ ಶಿಕ್ಷೆಯಾಗುವಂತೆ ಮಾಡಿ.ಈಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲಾರದು ಎಂದು ಹೇಳಿದ್ದಾರೆ.