ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಪವಿತ್ರ ಗ್ರಂಥ’ ಹರಿದ ಎಂಬ ಕಾರಣಕ್ಕೆ 19 ವರ್ಷದ ಯುವಕನನ್ನು ಹೊಡೆದು ಕೊಂದ ಜನ; ಹತ್ಯೆಯ ಭೀಕರ ವಿಡಿಯೋ ವೈರಲ್
ಫಿರೋಜ್‌ಪುರ: ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್‌ನ ಫಿರೋಜ್‌ಪುರದ ಗುರುದ್ವಾರದಲ್ಲಿ ನಡೆದಿದೆ.
19 ವರ್ಷದ ಯುವಕ ತಲ್ಲಿ ಗುಲಾಮ್ ಗ್ರಾಮದ ನಿವಾಸಿ ಬಕ್ಷೀಶ್ ಸಿಂಗ್ ಅಲಿಯಾಸ್ ಗೋಲಾ ಬಂಡಾಲಾ ಗ್ರಾಮದಲ್ಲಿರುವ ಗುರುದ್ವಾರವನ್ನು ಪ್ರವೇಶಿಸಿದ ನಂತರ ಸಿಖ್ಖರ ಪವಿತ್ರ ಗ್ರಂಥ ಗುರು ಗ್ರಂಥ ಸಾಹಿಬ್ ಅನ್ನು ಹರಿದು ಹಾಕಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಸ್ಥಳದಲ್ಲೇ ಇದ್ದ ಗುಂಪು ಬಕ್ಷೀಶ್ ಸಿಂಗ್ ನನ್ನು ತೀವ್ರವಾಗಿ ಥಳಿಸಿತ್ತು. ನಂತರ ಪೊಲೀಸರು ಯುವಕನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಅಷ್ಟರಲ್ಲೇ ಆತ ಸಾವನ್ನಪ್ಪಿದ್ದನು.
ಘಟನೆಯ ವಿಡಿಯೋ ಕೂಡ ಹೊರಬಿದ್ದಿದೆ. ಇದರಲ್ಲಿ ಜನರ ಗುಂಪೊಂದು ಮೊದಲು ಬಕ್ಷೀಶ್‌ನನ್ನು ಸುತ್ತುವರೆದು ನಂತರ ಥಳಿಸಿದೆ. ಬಳಿಕ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದನು.
ಬಕ್ಷೀಶ್ ಮಾನಸಿಕ ಅಸ್ವಸ್ಥನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಬಕ್ಷೀಶ್ ಸಿಂಗ್ ತಂದೆ ಲಖ್ವಿಂದರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಯುವಕನ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ತನ್ನ ಮಗನನ್ನು ಕೊಂದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಕ್ಷೀಶ್ ತಂದೆ ಪೊಲೀಸರನ್ನು ಆಗ್ರಹಿಸಿದ್ದಾರೆ. ಈ ಘಟನೆಯ ನಂತರ, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯ ಮಿಶ್ರಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಫಿರೋಜ್‌ಪುರದಲ್ಲಿ ನಡೆದ ಹತ್ಯಾಕಾಂಡದ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.