ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್ ಗಳ ಸಾಮೂಹಿಕ ರಜೆ; 78 ವಿಮಾನಗಳು ರದ್ದು
ನವದೆಹಲಿ, ಮೇ.8: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುಮಾರು 300 ಮಂದಿ ಹಿರಿಯ ಪೈಲಟ್ ಗಳು ಸಾಮೂಹಿಕವಾಗಿ ರಜೆ ತೆಗೆದುಕೊಂಡಿದ್ದಾರೆ. ಜೊತೆಗೆ ತಮ್ಮ ಮೊಬೈಲ್ ಫೋನ್ ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಸುಮಾರು 79 ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಟಾಟಾ ಗ್ರೂಪ್ ಒಡೆತನದ ನೂತನ ಉದ್ಯೋಗ ನೀತಿಯನ್ನು ವಿರೋಧಿಸಿ ಪೈಲಟ್ ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಪೈಲಟ್ ಗಳನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಆಡಳಿತ ಮಂಡಳಿ ತಿಳಿಸಿದೆ. ಇನ್ನು ಪೈಲೆಟ್ ಗಳ ಪ್ರತಿಭಟನೆಯಿಂದ ಮಂಗಳೂರು ಏರ್ಪೋರ್ಟ್ ನಲ್ಲಿ ವಿಮಾನ ಹಾರಾಟದಲ್ಲಿ ಇಂದು ಯಾವುದೇ ವ್ಯತ್ಯಯ ಕಂಡುಬಂದಿಲ್ಲ.