ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ
ಬೆಂಗಳೂರು, ಮೇ.8, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಶ್ರೀ ಅಶೋಕ್ ನಾಯಕ್ ಹಾಗೂ ಶ್ರೀಮತಿ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.