ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಬೆಂಗಳೂರು, ಮೇ.8, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಶ್ರೀ ಅಶೋಕ್ ನಾಯಕ್ ಹಾಗೂ ಶ್ರೀಮತಿ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

No Comments

Leave A Comment