ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಹೈದರಾಬಾದ್: ಭಾರೀ ಮಳೆಗೆ ತಡೆಗೋಡೆ ಕುಸಿದು ಮಗು ಸೇರಿ 13 ಮಂದಿ ಮೃತ್ಯು
ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಾಚುಪಲ್ಲಿ ಪೊಲೀಸರ ಪ್ರಕಾರ, ಬಲಿಯಾದವರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರು ಎಂದು ತಿಳಿದು ಬಂದಿದೆ. ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಅವರ ದೇಹಗಳನ್ನು ಜೆಸಿಬಿ ಬಳಸಿ ಅವಶೇಷಗಳಡಿಯಿಂದ ಬುಧವಾರ ಮುಂಜಾನೆ ಹೊರತೆಗೆಯಲಾಗಿದೆ.ಮಂಗಳವಾರ ನಗರ ಮತ್ತು ತೆಲಂಗಾಣದ ಹಲವೆಡೆ ಭಾರೀ ಮಳೆ ಸುರಿದಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವೆಡೆ ಜಲಾವೃತಗೊಂಡು ಸಂಚಾರಕ್ಕೆ ಅಡಚಣೆಯಾಗಿದೆ. ಡಿಆರ್‌ಎಫ್ ವಿಪತ್ತು ಪರಿಹಾರ ಪಡೆ) ತಂಡಗಳನ್ನು ನಿಯೋಜಿಸಲಾಗಿದ್ದು, ನಗರದ ವಿವಿಧೆಡೆ ನೀರು ನಿಂತಿರುವುದು ಮತ್ತು ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ತಿಳಿಸಿದ್ದಾರೆ.
ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ದಾನಕಿಶೋರ್ ಅವರು ಜಿಎಚ್‌ಎಂಸಿ ಆಯುಕ್ತ ರೊನಾಲ್ಡ್ ರೋಸ್ ಅವರೊಂದಿಗೆ ವಿವಿಧ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ನಗರದ ಮೈದಾನದಲ್ಲಿ ಡಿಆರ್‌ಎಫ್ ತಂಡಗಳಿಗೆ ಪರಿಹಾರ ಕಾರ್ಯ ಸಂಬಂಧಿ ಸೂಚನೆಗಳನ್ನು ನೀಡಿದರು