Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬೆಳ್ತಂಗಡಿ: ಹಿರಿಯ ರಾಜಕೀಯ ಮುತ್ಸದ್ದಿ ವಸಂತ ಬಂಗೇರ ಇನ್ನಿಲ್ಲ

ಬೆಳ್ತಂಗಡಿ, ಮೇ 8 : ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79) ಇಂದು ನಿಧನರಾಗಿದ್ದಾರೆ.ನಾಳೆ ಮುಂಜಾನೆ ಅವರ ಪಾರ್ಥಿವ ಶರೀರ ಹುಟ್ಟೂರಾದ ಬೆಳ್ತಂಗಡಿಗೆ ತರುವ ಸಾಧ್ಯತೆಯಿದೆ. ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಧಾನಸಭೆಗೆ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್‌ ಸೇರಿದಂತೆ ಮೂರು ಪಕ್ಷದಲ್ಲಿಗುರುತಿಸಿಕೊಂಡಿದ್ದರು.

ಕುವೆಟ್ಟು ಗ್ರಾಮದ. ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರರಾಗಿರುವ ಬಂಗೇರರು 15 ಜನವರಿ 1946ರಂದು ಜನಿಸಿದ್ದರು. ವಸಂತ ಬಂಗೇರ ಅವರು ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಎಸ್. ಎಸ್. ಎಲ್. ಸಿ. ಯನ್ನು ಮಾಡಿದರು. ಮುಲ್ಕಿ ಮತ್ತು ಉಜಿರೆಯ ಎಸ್. ಡಿ.ಎಂ. ಕಾಲೇಜುಗಳಲ್ಲಿ ವ್ಯಾಸಂಗವನ್ನು ಮಾಡಿ 1962 ರಲ್ಲಿ ಪಿ.ಯು.ಸಿ ವ್ಯಾಸಂಗ ಮಾಡಿದರು. 1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾಯಿತರಾಗಿ ಪ್ರಥಮ ಬಾರಿಗೆ ವಿಧಾನ ಸಭೆಯನ್ನು ಪ್ರವೇಶಿಸಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ.

No Comments

Leave A Comment