ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

Karnataka SSLC 2024 Toppers List: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ, ಇಲ್ಲಿದೆ ಟಾಪರ್ಸ್​​ ಲಿಸ್ಟ್

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್​ಎಸ್​ಎಲ್​ಸಿ  ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ  ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ 

  • ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ)

  • ಮೇದಾ ಪಿ ಶೆಟ್ಟಿ (ಬೆಂಗಳೂರು) 625ಕ್ಕೆ 624 ಅಂಕ

  • ಹರ್ಷಿತಾ ಡಿಎಂ (ಮಧುಗಿರಿ) 625ಕ್ಕೆ 624 ಅಂಕ

  • ಚಿನ್ಮಯ್ (ದಕ್ಷಿಣ ಕನ್ನಡ) 625ಕ್ಕೆ 624 ಅಂಕ

  • ಸಿದ್ದಾಂತ್ (ಚಿಕ್ಕೊಡಿ) 625ಕ್ಕೆ 624 ಅಂಕ

  • ದರ್ಶನ್ (ಶಿರಸಿ) 625ಕ್ಕೆ 624 ಅಂಕ

  • ಚಿನ್ಮಯ್ (ಶಿರಸಿ) 625ಕ್ಕೆ 624 ಅಂಕ

  • ಶ್ರೀರಾಮ್ (ಶಿರಸಿ) 625ಕ್ಕೆ 624 ಅಂಕ

ಎಸ್​ಎಸ್​ಎಲ್​ಸಿ ಟಾಪರ್ ಅಂಕಿತಾ ಮೊದಲ ಪ್ರತಿಕ್ರೆಯೆ

ಟಿವಿ9ಗೆ ಎಸ್​ಎಸ್​ಎಲ್​ಸಿ ಟಾಪರ್​ ಅಂಕಿತಾ ಕೊನ್ನೂರು ಪ್ರತಿಕ್ರಿಯಿಸಿದ್ದು, ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ನಾನು ಐಎಎಸ್​ ಮಾಡುವ ಕನಸು ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರಿನ ವಿದ್ಯಾರ್ಥಿಗಳು ಕೂಡ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ರಾಜಾಜಿನಗರದ ವಿವಿಎಸ್ ಸರ್ದಾರ್ ಪಟೇಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಮೂರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.​ ಅಂಕಿತಾ ಹಾಗೂ ಸೌರವ್ ಕೌಶಿಕ್​ಗೆ ತಲಾ 623 ಅಂಕಗಳು ಬಂದಿವೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆ ಶಿಕ್ಷಕರು ಮತ್ತು ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

44ನೇ ಬ್ಯಾಚ್ 100% ರಿಸಲ್ಟ್ ಬಂದಿರುವುದು ಸಂತಸ ತಂದಿದೆ. ಮಕ್ಕಳಿಗೆ ನಾವು ಉತ್ತಮವಾಗಿ ಪಾಠಗಳನ್ನ ಒದಗಿಸುತ್ತಿದ್ದೇವೆ ಎಂದು ವಿವಿಎಸ್ ಹೈಸ್ಕೂಲ್ ಪ್ರಾಶುಂಪಾಲೆ ವಾಣಿಶ್ರಿ ದೇಶಪಾಂಡೆ ಸಂತಸ ವ್ಯಕ್ತಪಡಿಸಿದ್ದಾರೆ.

No Comments

Leave A Comment