ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪ್ರಜ್ವಲ್ ರೇವಣ್ಣ ಇದುವರೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ- ಜಿ. ಟಿ ದೇವೇಗೌಡ

ಬೆಂಗಳೂರು: ವಿದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ ಅನ್ನೋದು ಅವ್ರ ಮನೆಯವರಿಗೂ ಗೊತ್ತಿಲ್ಲ ನಮಗೂ ಗೊತ್ತಿಲ್ಲ. ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಅವರು ಬಂದ ಮೇಲೆಯೇ ನಮಗೆ ಸಹ ಅವರ ಬಗ್ಗೆ ಮಾಹಿತಿ ತಿಳಿಯಲಿದೆ ಎಂದರು.

ಪ್ರಜ್ವಲ್ ಮೇಲೆ ಆರೋಪ ಕೇಳಿಬಂದಲ್ಲಿಂದ ಪಕ್ಷದಿಂದ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕೋ ಅನ್ನು ನಾವು ಸೂಕ್ತ ಸಮಯದಲ್ಲಿ ಮಾಡಿದ್ದೇವೆ. ಇನ್ನು ಏನಿದ್ದರೂ ಸರ್ಕಾರದ ಕೆಲಸ, ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದ್ದಾರೆ, ವಿಚಾರಣೆ ಮಾಡುತ್ತಾರೆ ಎಂದರು.

ಟಿಕೆಟ್ ಕ್ಯಾನ್ಸಲ್ ಮಾಡಿ ಮತ್ತೆ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ: ಇಂದು ಮೇ 15ಕ್ಕೆ ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಈ ಟಿಕೆಟ್ ನ್ನು ಕ್ಯಾನ್ಸಲ್ ಮಾಡಿದ್ದ ಅವರು, ಮತ್ತೆ ಬುಕ್ ಮಾಡಿದ್ದಾರೆ. ಇಂದು ಮಧ್ಯರಾತ್ರಿ 2 ಗಂಟೆಗೆ ಬ್ಯುಸ್ ನೆಲ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆಂದು ತಿಳಿದುಬಂದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿರಿಸಿದ್ದಾರೆ.

ಶೃಂಗೇರಿಗೆ ಇಂದು ಹೆಚ್ ಡಿ ರೇವಣ್ಣ: ಈ ಎಲ್ಲಾ ಗೊಂದಲ, ಪ್ರಕರಣಗಳ ಮಧ್ಯೆ ಪ್ರಜ್ವಲ್ ತಂದೆ ಶಾಸಕ ಹೆಚ್ ಡಿ ರೇವಣ್ಣ ಇಂದು ಶೃಂಗೇರಿ ಶಾರದಾಂಬೆ ಸನ್ನಿಧಿ ದರ್ಶನ ಮಾಡಲಿದ್ದಾರೆ. ಇದೇ ಪ್ರಕರಣದಲ್ಲಿ ಜೈಲುಪಾಲಾಗಿದ್ದ ರೇವಣ್ಣ ನಿನ್ನೆಯಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿ ಸಂಜೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ್ದರು.

No Comments

Leave A Comment