ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾರವಾರ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.

ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ.

 

 

ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣ, ಫ್ರಿಜ್ , ವಾಶಿಂಗ್ ಮಿಷನ್, ಅಡುಗೆ ಸಾಮಗ್ರಿ ಸೇರಿ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಘಟನೆಯಲ್ಲಿ ಸುಮಾರು 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ.
ಸ್ಫೋಟದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಮನೆ ಮಾಲೀಕ ನಿಲೇಶ್ ತಾಳೇಕರ್‌ ಗಾಯಗೊಂಡಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.

kiniudupi@rediffmail.com

No Comments

Leave A Comment