ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮೇ 20ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್, ನಿರಾಸೆಯಿಂದ ಮನೆಯತ್ತ ಹೆಜ್ಜೆ ಹಾಕಿದ ರೇವಣ್ಣ

ಬೆಂಗಳೂರು, (ಮೇ 17): ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ​42ನೇ ಎಸಿಎಂಎಂ ನ್ಯಾಯಾಲಯವು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಕಳೆದ ಎರಡು ದಿನಗಳಿಂದ ಎಸ್​ಐಟಿ ಹಾಗೂ ರೇವಣ್ಣ ಪರ ವಕೀಲರಿಂದ ವಾದ-ಪ್ರತಿವಾದ ಆಲಿಸಿದ್ದು, ಇದೀಗ ಅಂತಿಮವಾಗಿ ಕೋರ್ಟ್​ ರೇವಣ್ಣ ಅವರ ಜಾಮೀನು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಇದರೊಂದಿಗೆ ಇದರೊಂದಿಗೆ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆಯಾಗಿದೆ.

ಮೇ 20ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ್ದರಿಂದ ಎಚ್​ಡಿ ರೇವಣ್ಣ ಅವರು ನ್ಯಾಯಾಲಯದ ಅನುಮತಿ ಪಡೆದುಕೊಂಡು ಬೇಲ್​ ಸಿಗುತ್ತೋ ಇಲ್ವೋ ಎನ್ನುವ ಟೆನ್ಷನ್​ನಲ್ಲಿ ಮನೆಯತ್ತ ಹೆಜ್ಜೆ ಹಾಕಿದರು. ನಿನ್ನೆ(ಮೇ 16) ಜಾಮೀನು ಅರ್ಜಿಯ ವಾದ-ಪ್ರತಿವಾದ ಆಲಿಸಿದ್ದ  ಕೋರ್ಟ್​, ಒಂದು ದಿನ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಅದನ್ನು ಸೋಮವಾರದ ವರೆಗೆ ವಿಸ್ತರಿಸಿದೆ.

ಪ್ರಜ್ವಲ್ ​ಪೆನ್​ಡ್ರೈವ್​ ಪ್ರಕರಣದಲ್ಲಿ ರೇವಣ್ಣ ಎ1 ಆರೋಪಿ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ (ಏ.26)ಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳ ಪೆನ್​ಡ್ರೈವ್​ ಹಾಸನ ಜಿಲ್ಲೆಯಲ್ಲಿ ಹರಿದಾಡಲು ಆರಂಭಿಸಿತು. ಈ ಸಂಬಂಧ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ನಡುವೆ ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆ ನರಸೀಪುರ ಪೊಲೀಸ್​ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಶಾಸಕ ರೇವಣ್ಣ ಎ1 ಆರೋಪಿಯಾಗಿದ್ದರೆ, ಪುತ್ರ ಪ್ರಜ್ವಲ್ ಎ2 ಆರೋಪಿಯಾಗಿದ್ದಾರೆ. ಇನ್ನು ಈ ಪ್ರಕರಣ ಸಾಕಷ್ಟು ಸುದ್ದಿಯಾಗುತ್ತಿದ್ದಂತೆ, ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿದೆ. ಇದೀಗ ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆದ್ರೆ, ಎ2 ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಕೊಂಡಿದ್ದಾರೆ.

No Comments

Leave A Comment