Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 23ರವರೆಗೆ ಮಹಾ ಮಳೆ

ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಗುಬ್ಬಿ, ಬೇಗೂರು,ಯಲ್ಲಾಪುರ,ಶ್ರವಣಬೆಳಗೊಳ, ಚನ್ನರಾಯಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮದ್ದೂರು, ಚಿಕ್ಕಮಗಳೂರು,ಬಂಡೀಪುರ, ತುಮಕೂರು, ಕೂಡಲಸಂಗಮ, ಪೊನ್ನಂಪೇಟೆ, ವಿರಾಜಪೇಟೆ, ಶಿವಮೊಗ್ಗ, ಹೊಸದುರ್ಗ,ಹೊಸಕೋಟೆ, ಮಂಗಳೂರು, ಕಮ್ಮರಡಿ, ರಾಣೆಬೆನ್ನೂರು, ಮಂಡ್ಯ, ಕೃಷ್ಣರಾಜಪೇಟೆ, ಯುಗಟಿ, ಸಕಲೇಶಪುರ, ಮೂರ್ನಾಡು, ಧಾರವಾಡ, ಮಧುಗಿರಿ, ನಾಪೋಕ್ಲು, ಬಾಗಲಕೋಟೆ, ನಾಗಮಂಗಲ, ಕೊಪ್ಪ, ಚಿತ್ರದುರ್ಗ, ಮೈಸೂರು, ಸರಗೂರು, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆ ಮಳೆಯಾಘುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರಿನಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 34.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 – ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 24.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

No Comments

Leave A Comment