ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್

ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್​​​ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗು ಕೂಡ ವಿಶೇಷ ತಿನಿಖಾ ದಳ SIT ಪ್ರಯತ್ನ ನಡೆಸುತ್ತಿದೆ.

ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕೃತ್ಯದ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಇದಾದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್​ ನೀಡಿದ್ದರೂ, ಪ್ರಜ್ವಲ್​ ರೇವಣ್ಣ ಇನ್ನೂವರೆಗು ವಿಚಾರಣೆಗೆ ಹಾಜರಾಗಿಲ್ಲ.

ಪ್ರಕರಣಕ್ಕೆ ಪೂರಕವಾಗಿ ಕೆಲ ದಾಖಲೆಗಳನ್ನು ಸಂಗ್ರಹಿಸಿ ಎಸ್​ಐಟಿ ನ್ಯಾಯಾಲಯಕ್ಕೆ ಸಲ್ಲಿಸಿತು. ಈ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ವಿರುದ್ಧ ಬಂಧನ ವಾರಂಟ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಎಸ್​ಐಟಿ ಅಧಿಕಾರಿಗಳು ಮನವಿ ಮಾಡಿದ್ದರು.

ಪಾಸ್ ಪೋರ್ಟ್ ರದ್ದತಿಗೆ ಕೇಂದ್ರಕ್ಕೆ ಪತ್ರ

ಪ್ರಜ್ವಲ್​ ರೇವಣ್ಣ ಸಂಸದರಾಗಿರುವ ಕಾರಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿದ್ದಾರೆ. ಹೀಗಾಗಿ ಆ ಪಾಸ್ ಪೋರ್ಟ್ ರದ್ದಾದರೆ ಕೂಡಲೇ ಅವರು ಸ್ವದೇಶಕ್ಕೆ ಮರಳಬೇಕಾಗುತ್ತದೆ. ಈಗ ನ್ಯಾಯಾಲಯದ ಬಂಧನ ವಾರಂಟ್ ಆಧರಿಸಿ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಪತ್ರ ಬರೆಯಲಿದೆ.

ಆರ್ಥಿಕವಾಗಿ ಕಟ್ಟಿಹಾಕಲು SIT ಮಾಸ್ಟರ್​​ ಪ್ಲ್ಯಾನ್

ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್​ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

No Comments

Leave A Comment