ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಶಿರೂರು:ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಬೈಂದೂರು: ಮನೆಯ ಗೇಟ್ ಎದುರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ.

ಶನಿವಾರ ತಡರಾತ್ರಿ ಸುರಿದ ಗಾಳಿಮಳೆಗೆ ಹಡವಿನ ಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇರ್ಷಾದ್ ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಇಂದು ಬೆಳಗ್ಗೆ ಗೇಟ್ ದಾಟಿ ಹೊರಕ್ಕೆ ಬಂದಿದ್ದು, ಈ ವೇಳೆ ಗೇಟ್ ಎದುರು ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿಯನ್ನು ತುಳಿದರೆನ್ನಲಾಗಿದೆ.

ಇದರಿಂದ ವಿದ್ಯುತ್‌ ಆಘಾತಕ್ಕೆ ಒಳಗಾದ ಅವರು ತೀವ್ರವಾಗಿ ಅಸ್ವಸ್ಥಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಬೈಂದೂರು ಮೆಸ್ಕಾಂನ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kiniudupi@rediffmail.com

No Comments

Leave A Comment