ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಸಿಂಗಾಪುರದಲ್ಲಿ ವಾರಕ್ಕೆ 26 ಸಾವಿರ ಕೊರೊನಾ ಕೇಸ್ ಪತ್ತೆ; ಸೋಂಕಿನ ಹೊಸ ಅಲೆ ಭೀತಿ ಸೃಷ್ಟಿ

ಸಿಂಗಾಪುರ, ಮೇ. 19: ದಿನದಿಂದ ದಿನಕ್ಕೆ ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವಾರಕ್ಕೆ ಸುಮಾರು 26 ಸಾವಿರ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಜನರಿಗೆ ಮಾಸ್ಕ್ ಧರಿಸುವಂತೆ ಸಿಂಗಾಪುರ ಸರ್ಕಾರ ಆದೇಶ ಹೊರಡಿಸಿದೆ.

ಕೇವಲ ಒಂದು ವಾರದಲ್ಲಿ 25,900 ಜನರಿಗೆ ಕೊರೊನಾ ಸೋಂಕು ತಗುಲಿದೆ. ವಾರದಿಂದ ವಾರಕ್ಕೆ ಸೋಂಕಿತರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಈ ಮೂಲಕ ಒಂದೇ ವಾರದಲ್ಲಿ ಶೇಕಡಾ 90ರಷ್ಟು ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಕಂಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ ಸಚಿವ ಓಂಗ್ ಯೆ ಕುಂಗ್ ಅವರು, ನಾವು ಮತ್ತೊಂದು ಕೋವಿಡ್ ಅಲೆಯ ಆರಂಭದಲ್ಲಿದ್ದೆವೆ. ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಮುಂದಿನ ಒಂದೆರಡು ವಾರಗಳಲ್ಲಿ ಕೋವಿಡ್ ಸೋಂಕು ಉತ್ತುಂಗಕ್ಕೆ ತಲುಪಬಹುದು. ಮುಂದಿನ 2ರಿಂದ 4 ವಾರಗಳಲ್ಲಿ, ಅಂದರೆ ಜೂನ್ ಅಂತ್ಯದ ವೇಳೆಗೆ ಅಲೆ ಗರಿಷ್ಟ ಮಟ್ಟ ತಲುಪಲಿದೆ ಎಂದಿದ್ದಾರೆ.

ಮೇ 5ರಿಂದ 11ರವರೆಗೆ 25,900 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅದಕ್ಕಿಂತ ಹಿಂದಿನ ವಾರದಲ್ಲಿ ಕೊರೊನಾ ಸೋಂಕು 13,700ರಷ್ಟಿತ್ತು. ಆಸ್ಪತ್ರೆಗೆ ದಾಖಲಾಗುವ ದೈನಂದಿನ ಸರಾಸರಿ 250ನ್ನು ದಾಟಿದ್ದು ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ದಾಖಲಾಗುವ ದೈನಂದಿನ ಸರಾಸರಿ ಪ್ರಕರಣ 3 ತಲುಪಿದೆ. ಇನ್ನು ಕೊರೊನಾ ಸೋಂಕು ಏರಿಕೆ ಕಂಡ ಹಿನ್ನೆಲೆ ಸಿಂಗಾಪುರದ ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗುತ್ತಿದೆ. ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ಮುಂದೂಡುವಂತೆ ಹಾಗೂ ಸೂಕ್ತ ರೋಗಿಗಳನ್ನು ಮನೆಗೆ ವಾಪಾಸ್ಸು ಕಳುಹಿಸಿ ಸಂಚಾರಿ ಚಿಕಿತ್ಸಾಲಯದ ಸೇವೆ ಮುಂದುವರಿಸುವಂತೆ ಆರೋಗ್ಯ ಸಚಿವಾಲಯ ತಿಳಿಸಿದೆ.

No Comments

Leave A Comment