Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಬಾಗಲಕೋಟೆ: ಕೆರೆಯಲ್ಲಿ ಈಜಲು ತೆರಳಿದ್ದ 12 ವರ್ಷದ ಇಬ್ಬರು ಬಾಲಕರು ಸಾವು

ಬಾಗಲಕೋಟೆ, ಮೇ.20: ರಾಜ್ಯದಲ್ಲಿ ಮಳೆಯಿಂದ ಕೆರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಅನಾಹುತಗಳು ಕೂಡ ಸಂಭವಿಸುತ್ತಿವೆ. ಇತ್ತೀಚೆಗೆ ಹಾಸನದಲ್ಲಿ ನಾಲ್ವರು, ರಾಮನಗರದಲ್ಲಿ ಮೂವರು ನೀರು ಪಾಲಾಗಿದ್ದರು (Death). ಈಗ ಇದೇ ರೀತಿಯ ಮತ್ತೊಂದು ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಬೆಳಿಗ್ಗೆ 09 ಗಂಟೆಗೆ ಕೆರೆಯಲ್ಲಿ ಈಜಲು ಹೋಗಿದ್ದ ಸಂಜಯ್ ತಳವಾರ್ (12), ಸಮರ್ಥ್ ತಳವಾರ್ (12) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆರೆಯಲ್ಲಿ ನೀರು ಜಾಸ್ತಿ ಇದ್ದರಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಬನಹಟ್ಟಿ ಕೆರೆ ತುಂಬಿತ್ತು. ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಶವ ಹೊರ ತೆಗೆದಿದ್ದಾರೆ. ಬನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬನಹಟ್ಟಿ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment