ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬೆಂಗಳೂರು: ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ, ತೆಲುಗು ನಟಿಯರು, ಮಾಡೆಲ್ ಗಳು ಸೇರಿ ಟೆಕ್ಕಿಗಳು ಭಾಗಿ, CCB ದಾಳಿ ವೇಳೆ ಡ್ರಗ್ಸ್ ಪತ್ತೆ
ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ರೇವ್ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಪಾರ್ಟಿಯಲ್ಲಿ ಕೆಲ ಮಾಡೆಲ್ ಗಳು, ಟೆಕ್ಕಿಗಳು, ತೆಲುಗು ನಟಿಯರು ಭಾಗಿಯಾಗಿದ್ದರು ಎಂದು ಗೊತ್ತಾಗಿದೆ.
ಪಾರ್ಟಿ ನಡೆಸಿದ್ದು ಯಾರು?: ಕಾನ್ ಕಾರ್ಡ್ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ ಜಿ ಆರ್.ಫಾರ್ಮ್ಹೌಸ್ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿರುವ ಸುದ್ದಿ ತಿಳಿದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದಾಗ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.
ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು ತಿಳಿದುಬಂದಿದೆ.
ಬೆಂಜ್ ಕಾರಿನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಎಂಎಲ್ಎ ಕಾಕನಿ ಗೋವರ್ಧನರೆಡ್ಡಿ ಹೆಸರಿನ ಪಾಸ್ ಸಿಕ್ಕಿದೆ. ಜೊತೆಗೆ ದಾಳಿ ನಡೆದ ಫಾರ್ಮ್ಹೌಸ್ ಬಳಿ ಮರ್ಸಿಡಿಸ್-ಬೆನ್ಜ್, ಜಾಗ್ವಾರ್, ಆಡಿ ಕಾರ್ ಸೇರಿದಂತೆ 15ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಪಾರ್ಟಿಯಲ್ಲಿ ಮಾಡೆಲ್ಗಳು, ಟೆಕ್ಕಿಗಳು ತೆಲುಗು ನಟಿಯರು ಸೇರಿದಂತೆ ಅನೇಕರು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಗುರುತು ಪತ್ತೆ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.