ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್....ಮುಂದುವರೆದ ನಕ್ಸಲ್ ಕೂಂಬಿಂಗ್: ಶರಣಾಗತಿಗೆ ಸೂಚನೆ, ಪ್ಯಾಕೇಜ್ ನೀಡುತ್ತೇವೆ ಎಂದ ಪರಮೇಶ್ವರ್
ಛತ್ತೀಸ್‌ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು
ಕವರ್ಧಾ, ಮೇ.20: ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ ಬಿದ್ದಿದೆ ಎಂದು ಹೇಳಲಾಗಿದೆ. ಬೈಗಾ ಸಮುದಾಯದವರು ಬೀಡಿ ತಯಾರಿಸುವ ವೃತ್ತಿಯನ್ನು ಮಾಡುತ್ತಿದ್ದರು. ಇದಕ್ಕೆ ತೆಂಡು ಎಲೆಗಳು ಬೇಕಿತ್ತು. ಇದನ್ನು ತರಲು ಪಿಕಪ್ನಲ್ಲಿ ಹೋಗಿದ್ದಾರೆ. ಈ ವೇಳೆ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.
ಈ ಘಟನೆಯಿಂದ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯಿಂದ ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.