ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು

ಬೆಂಗಳೂರು: ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಈ ಕುರಿತು ಕಾಯ್ದಿರಿಸಲಾಗಿದ್ದ ಆದೇಶವನ್ನು ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ವಿಚಾರಣೆಯ (42ನೇ ಎಸಿಎಂಎಂ ಕೋರ್ಟ್ ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ. ಪ್ರೀತ್ ಅವರು ಪ್ರಕಟಿಸಿದರು. ರೂ. 5 ಲಕ್ಷ ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತರ ಒಬ್ಬರ ಶ್ಯೂರಿಟಿ ಒದಗಿಸುವುದು ಸೇರಿದಂತೆ ಮತ್ತಿತರ ಷರತ್ತುಗಳನ್ನು ವಿಧಿಸಲಾಗಿದೆ.

ಈ ಮೊದಲು ಇದೇ ನ್ಯಾಯಾಲಯ ನೀಡಿದ್ದ ಮಧ್ಯಂತರ ಜಾಮೀನಿಗೆ ಪ್ರಾಸಿಕ್ಯೂಷನ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಂತೆಯೇ ಈ ಅರ್ಜಿಯು, ಪರಿಶೀಲನೆಗೆ ಅರ್ಹವೊ ಅಲ್ಲವೋ ಎಂಬ ಆಕ್ಷೇಪದ ಮೇಲಿನ ವಾದ- ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು.

ರೇವಣ್ಣ ಮತ್ತು ಅವರ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 47 ವರ್ಷದ ಮನೆ ಕೆಲಸದಾಕೆ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕುರಿತು ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ದೂರು ದಾಖಲಿಸಲಾಗಿತ್ತು.

ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಕೂಡ ಹೊರಡಿಸಲಾಗಿದೆ. ಪರಾರಿಯಾಗಿರುವ ಪ್ರಜ್ವಲ್ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಹೆಚ್.ಡಿ.ರೇವಣ್ಣ ಅವರನ್ನು ಮೇ 4 ರಂದು ಬಂಧಿಸಲಾಗಿತ್ತು. ಬಳಿಕ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಅವರ ನ್ಯಾಯಾಂಗ ಬಂಧನ ಅಂತ್ಯದ ವೇಳೆಗೆ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದರು.

No Comments

Leave A Comment