ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಅಡುಗೆ ಅನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರ ಸಾವು
ಮೈಸೂರು ಮೇ 22: ಮೈಸೂರಿನ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರೂ ಎರಡು ದಿನದ ಹಿಂದೆಯೇ ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.
ಮೂಲತಃ ಚಿಕ್ಕಮಗಳೂರು ಸಖರಯಪಟ್ಟಣದ ಕುಟುಂಬ ಕಳೆದ 30 ವರ್ಷದಿಂದ ಮೈಸೂರಿನಲ್ಲಿ ವಾಸವಾಗಿದೆ. ನಾಲ್ವರೂ ಕಳೆದ ಗುರುವಾರ ಗುರುವಾರ ಸಂಬಂಧಿಕರ ಮದುವೆ ಹೋಗಿದ್ದರು. ಮದುವೆ ಮುಗಿಸಿಕೊಂಡು ತಮ್ಮ ಊರಾದ ಸಖರಯಪಟ್ಟಣಕ್ಕೆ ಹೋಗಿದ್ದರು. ಅಲ್ಲಿಂದ ಸೋಮವಾರ ಬೆಳಗ್ಗೆ ಮೈಸೂರಿಗೆ ವಾಪಸ್ಸಾಗಿದ್ದರು.
ಸೋಮವಾರ ರಾತ್ರಿ ಅನಿಲ ಸೋರಿಕೆಯಾಗಿದೆ. ಇದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಂಗಳವಾರ (ಮೇ 21) ಇಡೀ ದಿನ ಮನೆಯ ಬಾಗಿಲು ತೆರೆದಿರಲಿಲ್ಲ. ಇಂದು (ಮೇ 21) ಅರ್ಚನಾ ಮತ್ತು ಸ್ವಾತಿ ಕಾಲೇಜು ಸ್ನೇಹಿತರು ಮನೆ ಬಳಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಲ್ಲಿ ನಾಲ್ಕು ಗ್ಯಾಸ್ ಪತ್ತೆಯಾಗಿವೆ.