ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಅಶ್ಲೀಲ ವಿಡಿಯೋ ಪ್ರಕರಣ: ವಿದೇಶಾಂಗ ಸಚಿವಾಲಯದಿಂದ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್

ನವದೆಹಲಿ: ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋ ಬಹಿರಂಗವಾದ ನಂತರ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್​ಪೋರ್ಟ್ ರದ್ದುಗೊಳಿಸುವಂತೆ ಪ್ರಕರಣ ತನಿಖೆ ನಡೆಸುತ್ತಿರುವ ಎಸ್​ಐಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸೆರ್ಕಾರಕ್ಕೆ ಎರಡು ಬಾರಿ ಪತ್ರ ಬರೆದಿದ್ದರು. ಇದರ ಬೆನ್ನಲೇ ವಿದೇಶಾಂಗ ಸಚಿವಾಲಯ, ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದರಿಂದ ಪ್ರಜ್ವಲ್ ರೇವಣ್ಣ​​ಗೆ ಹಂತ ಹಂತವಾಗಿ ಸಂಕಷ್ಟು ಶುರುವಾದಂತಾಗಿದೆ.

ವಿದೇಶಾಂಗ ಸಚಿವಾಲಯ ಇಂದು ಪ್ರಜ್ವಲ್ ರೇವಣ್ಣ​ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ವಿದೇಶಕ್ಕೆ ತೆರಳಲು ಕಾರಣವೇನು? ಆರೋಪದ ಬಗ್ಗೆ ಹಾಗೂ ತನಿಖೆಗೆ ಯಾವಾಗ ಹಾಜರಾಗುತ್ತೀರಿ? ಮತ್ತು ಪಾಸ್​ಪೋರ್ಟ್​ ರದ್ದುಗೊಳಿಸುವ ಬಗ್ಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಏಪ್ರಿಲ್ 26ರಂದೇ ದೇಶ ಬಿಟ್ಟು ಜರ್ಮನಿಗೆ ಹೋಗಿದ್ದಾರೆ. ಯಾವುದೇ ನೋಟಿಸ್ ಜಾರಿ ಮಾಡಿದರೂ ಸಹ ಪ್ರಜ್ವಲ್ ರೇವಣ್ಣ ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರಿಗೆ ಎರಡು ಬಾರಿ ಪತ್ರ ಬರೆದಿದ್ದಾರೆ.

No Comments

Leave A Comment