ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾಗೆ ಸಿಸಿಬಿಯಿಂದ ನೋಟಿಸ್ ಜಾರಿ, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ತಾವು ಹೈದರಾಬಾದ್‍ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು.
ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.
ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿತ್ತು. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಹೇಳಿದ್ದರು.
ಈ ನಜುವೆ ಪಾರ್ಟಿಯಲ್ಲಿ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿತ್ತು.
73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಎಂದು ಬಂದಿತ್ತು. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು.