ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ? ಸಿಎಂ ಸಿದ್ದರಾಮಯ್ಯ

ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ ಎಂದರು.

ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ? ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದೆ. ಒಂದರಲ್ಲಿ ಸ್ಟೇಷನ್ ಬೇಲ್ ಸಿಕ್ಕಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ? ಕಾನೂನು ಹಾಗೆ ಹೇಳುತ್ತದೆಯಾ? ಎಂದು ಪ್ರಶ್ನಿಸಿದರು.

ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೊನ್ನೆ ರಾತ್ರಿ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಶರಣಾಗಿದ್ದು ವಿಚಾರಣೆ ಬಳಿಕ ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಕಲ್ಲು ಕ್ವಾರಿ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿ ವಾಪಸ್ಸಾಗಿದ್ದರು.

No Comments

Leave A Comment