ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಗೆ ಟ್ರಕ್ ಡಿಕ್ಕಿಯಾಗಿ 11 ಮಂದಿ ದುರ್ಮರಣ, 10 ಮಂದಿಗೆ ಗಾಯ
ಲಖನೌ: ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ಬಸ್’ಗೆ ಟ್ರಕ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದಿದ್ದು, ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಇವರೆಲ್ಲರೂ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಶನಿವಾರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 10 ಭಕ್ತರು ಗಾಯಗೊಂಡಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಬಸ್ ಪ್ರಯಾಣಿಕರು ರಾತ್ರಿ ಶಹಜಹಾನ್‌ಪುರದಲ್ಲಿ ಊಟಕ್ಕೆಂದು ಇಳಿದಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಡಂಪರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಎಲ್ಲಾ ಗಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡದ ಪೂರ್ಣಂಗಿರಿಯಲ್ಲಿರುವ ಮಾತೆಯ ಆಸ್ಥಾನಕ್ಕೆ ಹೋಗುತ್ತಿದ್ದರು. ಪ್ರತಿದಿನ ಮಾತೆಯ ಆಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಸೀತಾಪುರದ ಸಿಂಧೌಲಿಯ ಭಕ್ತರು ಇಲ್ಲಿ ದರ್ಶನಕ್ಕೆ ಹೋಗುತ್ತಿದ್ದರು. ಕೆಲವರು ಬಸ್ಸಿನಲ್ಲಿ ಕುಳಿತಿದ್ದರೆ ಕೆಲವರು ಹೊರಗೆ ಅಡ್ಡಾಡುತ್ತಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.