ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಉಳ್ಳಾಲ: ಮಳೆಯ ಆರ್ಭಟಕ್ಕೆ ಆವರಣಗೊಡೆ ಕುಸಿತ : ಎರಡು ಕಾರು ಜಖಂ
ಮಂಗಳೂರು ಮೇ 26: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿದ ಭಾರೀ ಮಳೆಗೆ ಆವರಣಗೊಡೆ ಕುಸಿದು ಬಿದ್ದ ಪರಿಣಾಮ ಎರಡು ಕಾರುಗಳು ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿ ಮರದ ಮಿಲ್‌ನ ಬಳಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಆವರಣಗೋಡೆ ಒದ್ದೆಯಾಗಿತ್ತು. ಯೇನೆಪೋಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದ ಕೇರಳದ ಕುಟುಂಬವೊಂದು ಆವರಣ ಗೋಡೆ ಪಕ್ಕ ಕಾರು ನಿಲ್ಲಿಸಿದ್ದರು. ಆವರಣ ಗೋಡೆಯ ಕೆಂಪುಕಲ್ಲುಗಳಡಿ ಸಿಲುಕಿ ಈ ಕಾರುಗಳ ಗಾಜುಗಳು ನಜ್ಜುಗುಜ್ಜಾಗಿವೆ.
ಸ್ಥಳದಲ್ಲಿದ್ದ ಬೇಲ್‍ಪುರಿ ಮಾರಾಟದ ಗಾಡಿ ಕಲ್ಲಿನಡಿಗೆ ಸಿಕ್ಕಿ ಸಂಪೂರ್ಣ ಹಾನಿಗೊಂಡಿದೆ. ಬೇಲ್‍ಪುರಿ ಮಾರುವವ ಎರಡು ದಿನಗಳ ಹಿಂದೆ ಸ್ಥಳಕ್ಕೆ ₹ 15 ಸಾವಿರ ಪಾವತಿ ಮಾಡಿ ಆವರಣ ಗೋಡೆ ಪಕ್ಕದಲ್ಲಿ ಕೈಗಾಡಿಯನ್ನು ನಿಲ್ಲಿಸಿದ್ದ. ಆ ಕೈಗಾಡಿ ಕಲ್ಲುಗಳ ಅಡಿ ಸಿಲುಕಿ ಅಪ್ಪಚ್ಚಿಯಾಗಿದೆ ಎಂದು ತಿಳಿದು ಬಂದಿದೆ.